
ಫೈಲುಗಳ ನಡುವೆ ಧೂಳು ತಿನ್ನುತ್ತಿದ್ದ ಕೆಲವು ಹನಿಗವಿತೆಗಳು.
ರಜಾ
ನನ್ನೆದುರಲ್ಲೇ ಮಿಲಿಟರಿ ವ್ಯಾನೊಂದು
ಸರಿದು ಹೋದದ್ದು
ಪುಟ್ಟ ಮಗು ಅದರೆಡೆಗೆ ಕೈ ಬೀಸಿ
‘ಟಾ..ಟಾ..’ ಎಂದದ್ದು
ಬಾಗಿಲ ಪಕ್ಕ
ಕುಳಿತ ಯೋಧನೊಬ್ಬ
ಅದನ್ನು ಸ್ವೀಕರಿಸಿದ್ದು
ಒಂದೇ ಕ್ಷಣಕ್ಕೆ ನಡೆದು ಹೋಯಿತು!
ಇನ್ನು ಯುದ್ಧಕ್ಕೆ ರಜಾ!
ಪಾವತಿ
ಗುಲಾಬಿ ಮತ್ತು ಕವಿತೆ ಜತೆ
ಬರುತ್ತಿದ್ದೇನೆ
ಧಾರಾವಿಯ ಕಪ್ಪು ಬೆಳಕಿನ ದಾರಿ ಒಡೆದು
ಎದ್ದು ಬಂದ ಪುಟ್ಟ ಮಗು
ಗುಲಾಬಿಯನ್ನು ಕೈ ಮಾಡಿ ಕರೆಯಿತು
ನನ್ನ ಕವಿತೆ ಗುಲಾಬಿಯ ಜೊತೆ
ಮಗುವಿನ ಕಣ್ಣಲ್ಲಿ
ಇಂಗಿ ಹೋಯಿತು
ಪಡೆದ ಸಾಲ ಮರಳಿದಂತೆ
ತಾಯಿ
ಅವಳ ಮಡಿಲಲ್ಲಿ ಮುಳುಗೇಳುತ್ತಿದ್ದ ಮಗು
ಪಕ್ಕನೆ ಅವಳ ಮುಖ ಪರಚಿ ಬಿಟ್ಟಿತು
ಆ ಗಾಯವನ್ನು ಆರದಂತೆ
ಜೋಪಾನ ಇಟ್ಟು
ನರಳುತ್ತಾಳೆ ತಾಯಿ
ಇಂದಿಗೂ ಸುಖದಿಂದ!
ಮೌನ
ಸಾವು ಹಗುರ
ಅದು ಬಿಟ್ಟು ಹೋಗುವ
ಮೌನ
ಹೊರಲಾಗದಷ್ಟು ಭಾರ!
ಇಲ್ಲಿರುವ ನನ್ನ ಹೆಚ್ಚಿನ ಬರಹಗಳಿಗೆ ನಾನು ಫೋಟೋಗಳನ್ನು ಗೂಗಲ್ ಇಮೇಜ್ನಿಂದ ಪಡೆದಿದ್ದೇನೆ. ನನ್ನ ಬರಹಗಳ ತೂಕ ಹೆಚ್ಚಿಸಿದ ಈ ಎಲ್ಲ ಅನಾಮಿಕ ಕಲಾವಿದರಿಗೆ ನಾನು ಚಿರ ಋಣಿ.
nice hanigavithes.
ReplyDeleteತುಂಬಾ ಮಾರ್ಮಿಕ, ಮತ್ತೆ ಒಳ್ಳೆಯ ಕವನ. ಧೂಳು ಹಿಡಿಯಲಾರದ್ದು ಇದು :)
ReplyDeletethank u ishwar, thank u gubbachchi
ReplyDeleteಒಳ್ಳೆಯ ಕವಿತೆಗಳು...ಖಂಡಿತಾ ಧೂಳು ಕೆಡವಿ ನಿಂತಿವೆ ಇದರಲ್ಲಿನ ಪದಗಳು!
ReplyDelete